ವಿಪಕ್ಷಗಳ ಮೈತ್ರಿಕೂಟಕ್ಕೆ ಐಎನ್‌ಡಿಐಎ(ಇಂಡಿಯಾ)ಹೆಸರು-ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್-ಅರುಣ್‌ಶ್ಯಾಂ ವಾದ

0

ಕೇಂದ್ರ,ಚುನಾವಣಾ ಆಯೋಗ, 26 ವಿಪಕ್ಷಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್

ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಣಿಸಲು ತಂತ್ರ ಹೆಣೆಯುತ್ತಿರುವ 26 ವಿರೋಧ ಪಕ್ಷಗಳು ಒಗ್ಗೂಡಿ ಭಾರತೀಯ ರಾಷ್ಟ್ರೀಯ ಅಭಿವೃದ್ಧಿಶೀಲ ಎಲ್ಲರನ್ನೂ ಒಳಗೊಳ್ಳುವ ಮೈತ್ರಿಕೂಟ'(ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲಯನ್ಸ್ಇಂಡಿಯಾ’)ರಚಿಸಿಕೊಂಡಿದ್ದವು.ಈ ಒಕ್ಕೂಟದ ಹೆಸರಾಗಿ `ಇಂಡಿಯಾ’ ಪದ ಬಳಸದಂತೆ ವಿರೋಧ ಪಕ್ಷಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಹಾಗೂ 26 ವಿಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.


ಸಾಮಾಜಿಕ ಚಿಂತಕ ಗಿರೀಶ್ ಭಾರದ್ವಾಜ್ ಎಂಬವರು ದೆಹಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದು ಅರ್ಜಿದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿ ಅರುಣ್‌ಶ್ಯಾಮ್ ಪುತ್ತೂರು ಅವರು ವಾದಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಮೂರನೇ ಬಾರಿ ಅಧಿಕಾರಕ್ಕೆ ಏರುವುದನ್ನು ತಪ್ಪಿಸಲು ಕಾಂಗ್ರೆಸ್ ಸಹಿತ ಸಮಾನ ಮನಸ್ಕ ಪಕ್ಷಗಳ ಒಕ್ಕೂಟ ಅಸ್ತಿತ್ವಕ್ಕೆ ಬಂದಿದ್ದು ಅದಕ್ಕೆ ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್-ಐಎನ್‌ಡಿಐಎ(ಇಂಡಿಯಾ)ಎನ್ನುವ ಹೆಸರನ್ನು ಇಟ್ಟಿದ್ದಾರೆ.ಇದರ ವಿರುದ್ಧ ಸಾಮಾಜಿಕ ಚಿಂತಕ ಗಿರೀಶ್ ಭಾರದ್ವಾಜ್ ಎಂಬವರು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತ ಅರ್ಜಿ ದಾಖಲಿಸಿದ್ದಾರೆ.ಅರ್ಜಿಯನ್ನು ವಿಚಾರಣೆಗೆತ್ತಿಕೊಂಡ ದೆಹಲಿ ಹೈಕೋರ್ಟ್ 26 ವಿಪಕ್ಷಗಳಿಗೆ ಮತ್ತು ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟೀಸ್ ಜಾರಿಗೊಳಿಸುವಂತೆ ಆದೇಶಿಸಿ ವಿಚಾರಣೆಯನ್ನು ಅಕ್ಟೋಬರ್ 31ಕ್ಕೆ ಮುಂದೂಡಿದೆ.
ಈ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕೆನ್ನುವ ಮನವಿಯ ಬಗ್ಗೆ ನ್ಯಾಯಮೂರ್ತಿಗಳಾದ ಸತೀಶ್‌ಚಂದ್ರ ಶರ್ಮಾ ಹಾಗೂ ಸಂಜೀವ್ ನಾರೂಲಾ ಅವರು ಈ ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ಚುನಾವಣಾ ಆಯೋಗ ಹಾಗೂ 26 ಪಕ್ಷಗಳಿರುವ ಮೈತ್ರಿಕೂಟಕ್ಕೂ ಅಗತ್ಯ ಸಮಯಾವಕಾಶ ನೀಡಿ ತಮ್ಮ ವಿಷಯವನ್ನು ಮಂಡಿಸಲು ತಿಳಿಸಬೇಕಾಗಿದೆ ಎಂದು ಹೇಳಿ ವಿಚಾರಣೆ ಮುಂದೂಡಿದರು.

LEAVE A REPLY

Please enter your comment!
Please enter your name here