ಪುತ್ತೂರು: ದ.ಕ ಜಿಲ್ಲೆ, ಬೆಳ್ತಂಗಡಿ ತಾಲೂಕು, ಉಜಿರೆಯಲ್ಲಿ 2011 ರಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ನಂತರ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತವಾದ ಆರೋಪಿಯನ್ನು ನಿರಪರಾಧಿಯೆಂದು ನ್ಯಾಯಾಲಯವು ಘೋಷಿಸಿದ್ದು ಸೈಜ ಆಪರಾಧಿಗಳು ಯಾರೆಂದು ಇಲ್ಲಿಯವರೆಗೂ ಗೊತ್ತಾಗಿರುವುದಿಲ್ಲ. ಅದುದರಿಂದ ಈ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಅಪರಾಧಿಯನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ನೀಡುವಂತೆ ಈ ಮೂಲಕ ಒತ್ತಾಯಿಸುತ್ತಿದ್ದೇವೆ. ನಿಜವಾದ ಆರೋಪಿಯನ್ನು ಬಂಧಿಸಲು ಯಾವ ಹೋರಾಟಕ್ಕೂ ಸಿದ್ದ ಎಂದು ಒಕ್ಕಲಿಗ ಗೌಡ ಸೇವಾ ಸಂಘ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.
ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಹತ್ಯಾ ಪ್ರಕರಣವನ್ನು ಮರು ತನಿಖೆಯನ್ನು ಮಾಡಿ ನೈಜ ಅಪರಾಧಿಗಳನ್ನು ಬಂಧಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟವನ್ನು ಪ್ರತ್ತೂರು ತಾಲೂಕು ಒಕ್ಕಲಿಗೆ ಗೌಡ ಸೇವಾ ಸಂಘ ವತಿಯಿಂದ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಉಪಾಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಖಜಾಂಚಿ ಲಿಂಗಪ್ಪ ಗೌಡ ತೆಂಕಿಲ, ದಯಾನಂದ ಕೆ ಎಸ್, ಉಷಾಮಣಿ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಾಯ, ದಾಮೋಧರ್, ಸುರೇಶ್ ಗೌಡ ಕಲ್ಲಾರೆ, ಶ್ರಿಧರ್ ಉಪಸ್ಥಿತರಿದ್ದರು.