ಆ.6: ಬಂಟರ ಸಂಘ ಮಾಣಿ ವಲಯದ ವತಿಯಿಂದ ಆಟಿಡೊಂಜಿ ಕೂಟ

0

ವಿಟ್ಲ: ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಆ.6ರಂದು ಬಂಟರ ಸಂಘ ಮಾಣಿ ವಲಯದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ ದೀಪ ಪ್ರಜ್ವಲನೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರದ ಪ್ರಹ್ಲಾದ್ ಶೆಟ್ಟಿ ಜಡ್ತಿಲರವರು ದೀಪಬೆಳಗಿಸಿ ಉದ್ಘಾಟಿಸಲಿದ್ದಾರೆ. ಬಂಟರ ಸಂಘ ಮಾಣಿ ವಲಯದ ಅಧ್ಯಕ್ಷರಾದ ಬಿ.ಎಂ.ಗಂಗಾಧರ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಉಳಿದಂತೆ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ ಆಟಿ ತಿಂಗಳ ವಿಶೇಷ ಖಾದ್ಯಗಳನ್ನೊಳಗೊಂಡ ಭೋಜನ ನಡೆಯಲಿದೆ. ಬಳಿಕ ವಿವಿಧ ಆಟೋಟಗಳು ನಡೆಯಲಿದೆ.

LEAVE A REPLY

Please enter your comment!
Please enter your name here