ಉಪ್ಪಿನಂಗಡಿ: ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಾಗಾರ

0

ಉಪ್ಪಿನಂಗಡಿ: ವ್ಯಕ್ತಿಯ ಜೀವನದಲ್ಲಿ ವಿದ್ಯಾರ್ಥಿ ಬದುಕು ಪ್ರಮುಖ ಘಟ್ಟವಾಗಿದ್ದು, ತನ್ಮೂಲಕ ಯಾವುದೇ ಅಡೆತಡೆಗಳನ್ನು ನಿಯಂತ್ರಿಸುವ ಶಕ್ತಿ ಹೊಂದಿರುತ್ತಾರೆ. ಉತ್ತಮ ಅಭಿರುಚಿಯ ಅಭ್ಯಾಸದೊಂದಿಗೆ ಸುಸ್ತಿರ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖವಾದುದು ಎಂದು ಪುತ್ತೂರು ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್. ಹೇಳಿದರು.
ಅವರು ಆ. 5ರಂದು ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಬಗ್ಗೆ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿ, ಒಬ್ಬಾತ ವ್ಯಕ್ತಿ ದುರಭ್ಯಾಸದ ಚಟಕ್ಕೆ ಬಿದ್ದರೆ ಆತನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ದುರಂತ ಅಂತ್ಯವಾಗುತ್ತದೆ. ಜೊತೆಗೆ ಸಮಾಜದಲ್ಲಿಯೂ ಕೆಟ್ಟ ಹೆಸರು, ದೂಷಣೆಗಳು ಇರುತ್ತದೆ. ಆದ್ದರಿಂದ ಮಾದಕ ಮುಕ್ತ ಸಮಾಜ ಕಟ್ಟಲು ವಿದ್ಯಾರ್ಥಿಗಳು ಬದ್ಧರಾಗಬೇಕು ಎಂದರು.


ಮಂಗಳೂರು ಸಮಗ್ರ ಪುನರ್ವಸತಿ ಕೇಂದ್ರದ ಆಡಳಿತಾಧಿಕಾರಿ ಲಿಡಿಯಾ ಲೋಬೋ, ಆಪ್ತ ಸಮಾಲೋಚಕ ಬೆನ್ಸನ್ ಡಿಸೋಜಾ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಅಜೀಜ್ ಬಸ್ತಿಕ್ಕಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಉಪ್ಪಿನಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕೆ.ವಿ., ಸಂದರ್ಭೋಚಿತವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಯು.ಟಿ. ತೌಸೀಫ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಅಬ್ದುರ್ರಹ್ಮಾನ್ ಯುನಿಕ್, ಅನಿ ಮಿನೇಜಸ್, ವೆಂಕಪ್ಪ ಪೂಜಾರಿ, ಆದಂ ಕೊಪ್ಪಳ, ಶ್ರೀಮತಿ ರೆಹನಾಝ್, ಜಾನ್ ಕೆನ್ಯೂಟ್, ಸ್ಥಳೀಯರಾದ ನಝೀರ್ ಮಠ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಸುಧೀರ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕರಾದ ರಮೇಶ್ ಎಚ್.ಜೆ. ವಂದಿಸಿದರು. ಇಬ್ರಾಹೀಂ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here