ಮಾಣಿ ಗ್ರಾಮ ಸಭೆ

0

ವಿಟ್ಲ: ಮಾಣಿ ಗ್ರಾಮ ಪಂಚಾಯತಿನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಷಾರವರು ನೋಡೆಲ್ ಅಧಿಕಾರಿಯಾಗಿದ್ದರು.
ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತಾ ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here