ಸಂಪ್ಯ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು:ಸಂಪ್ಯ ನವಚೇತನಾ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಸೆ.19ರಿಂದ ಎರಡು ದಿನಗಳ ಕಾಲ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯು ಆ.6ರಂದು ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಲಕ್ಷ್ಮಣ್ ಬೈಲಾಡಿ, ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಜಯಕುಮಾರ್ ನಾಯರ್, ಹಿಂದೂ ಜಾಗರಣಾ ವೇದಿಕೆಯ ಗಣರಾಜ ಭಟ್ ಕೆದಿಲ, ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್., ಕಾರ್ಯದರ್ಶಿ ಉಮೇಶ್ ಎಸ್.ಕೆ., ಉಪಾಧ್ಯಕ್ಷ ಮಂಜಪ್ಪ ಗೌಡ, ಪ್ರಮುಖರಾದ ಕೃಷ್ಣಪ್ಪ ಕೆ., ಭೀಮಯ್ಯ ಭಟ್, ವೇಣುಗೋಪಾಲ ಶೆಟ್ಟಿ, ಸುನೀತಾ ಜೆ.ನಾಯರ್, ರಮನಾಥ ಗೌಡ ಬೈಲಾಡಿ ಸೇರಿದಂತೆ ಯುವಕ ಮಂಡಲದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here