ಬೆಳ್ಳಾರೆ : ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ,ಕೆವಿಜಿ ಆಸ್ಪತ್ರೆ ಸುಳ್ಯ,ಸುಧಾ ಭರಣೀ ಆಯುರ್ವೇದ ಚಿಕಿತ್ಸಾಲಯ ಪುತ್ತೂರು ಇವರಿಂದ ದಿ.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಆ.6 ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು.
ಮಾಜಿ ಸಚಿವ ಎಸ್.ಅಂಗಾರ ಅವರು ದಿ.ಪ್ರವೀಣ್ ನೆಟ್ಟಾರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿದರು. ಸೇವಾ ಭಾರತಿ ಹೆಲ್ಪ್ ಲೈನ್ ಸುಳ್ಯ ತಾಲೂಕು ಉಪಾಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಸೇವಾ ಭಾರತಿ ದಕ್ಷಿಣ ಪ್ರಾಂತ ಕಾರ್ಯದರ್ಶಿ ಚೆನ್ನಯ್ಯ ಸ್ವಾಮಿ, ವೆನ್ಲಾಕ್ ಜಿಲ್ಲಾಸ್ಪತ್ರೆಯ ನೋವು ಉಪಶಾಮಕ ಹಿರಿಯ ವೈದ್ಯ ಡಾ.ಅಣ್ಣಯ್ಯ ಕುಲಾಲ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ಕೆ.ವಿ.ಜಿ ಡೆಂಟಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಸುಪ್ರಿಯ, ದಿ.ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ ನೆಟ್ಟಾರು,ಪತ್ನಿ ನೂತನ ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುದರ್ಶನ ಸೂರ್ತಿಲ ಸ್ವಾಗತಿಸಿ,ಅನಘ ಪ್ರಭು ಪ್ರಾರ್ಥಿಸಿದರು. ಎ.ಟಿ.ಕುಸುಮಾಧರ ಅವರು ಕಾರ್ಯಕ್ರಮ ನಿರೂಪಿಸಿದರು.