ಜಿಲ್ಲೆಗೆ 10 ಪಶು ಸಂಜೀವಿನಿ ಆ್ಯಂಬುಲೆನ್ಸ್​

0

ಪಶುಗಳ ಉಚಿತ ಚಿಕಿತ್ಸೆಗೆ ಕಾಂಗ್ರೆಸ್ ಸರಕಾರದ ಮಹತ್ವದ ಕೊಡುಗೆ: ಶಾಸಕ‌ ಅಶೋಕ್‌ ಕುಮಾರ್ ರೈ

ಪುತ್ತೂರು:ಪಶುಗಳಿಗೆ ಸೇರಿದಂತೆ ಯಾವುದೇ ಪ್ರಾಣಿಗಳಿಗೆ ತೊಂದರೆಯಾದಲ್ಲಿ ವೈದ್ಯರು ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಿ ಮೂಕಪ್ರಾಣಿಗಳನ್ನು ಸಲಹುವ ವ್ಯವಸ್ಥೆಗೆ ರಾಜ್ಯದ ಕಾಂಗ್ರೆಸ್ ಸರಕಾರದಿಂದ ದ .ಕ ಜಿಲ್ಲೆಗೆ ಒಟ್ಟು 10 ಪಶು ಸಂಜೀವಿನಿ ಆ್ಯಂಬುಲೆನ್ಸ್​ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಇದರಿಂದ ಪಶು ಸಾಕಾಣಿಕೆದಾರರಿಗೆ ಪ್ರಯೋಜನವಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.


ಪುತ್ತೂರಿಗೆ ಆಗಮಿಸಿದ ಅಂಬುಲೆನ್ಸ್ ವ್ಯವಸ್ಥೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಮೂಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಏಕೈಕ ಉದ್ದೇಶದಿಂದ ಈ ವ್ಯವಸ್ಥೆಯನ್ನು ಸರಕಾರ ಜಾರಿಗೆ ತಂದಿದೆ. ಪ್ರಾಣಿಗಳಿಗೆ ಅನಾರೋಗ್ಯ ಕಂಡು ಬಂದಲ್ಲಿ ಟೋಲ್ ಫ್ರೀ ನಂಬರಿಗೆ ಕರೆ ಮಾಡಿದರೆ ಸ್ಥಳಕ್ಕೆ ಬಂದು ನಿಮ್ಮ ಪ್ರಾಣಿಗಳನ್ನು ಆಂಬುಲೆನ್ಸ್ ಮೂಲಕ ಕರೆದೊಯ್ಯಲಾಗುತ್ತದೆ ಬಳಿಕ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಒಪ್ಪಿಸಲಾಗುತ್ತದೆ. ಮನುಷ್ಯರ ಹಾಗೇ ಪ್ರಾಣಿಗಳು ಎಂಬ ಭಾವನೆ ನಮ್ಮಲ್ಲಿರಬೇಕು, ಪ್ರಾಣಿಗಳಿಗೆ ಅನಾರೋಗ್ಯ ಕಂಡು ಬಂದಲ್ಲಿ ಅವುಗಳಿಗೆ ಎಲ್ಲಾ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಉದ್ಯಮಿಗಳಾದ ರಿತೇಶ್ ಶೆಟ್ಟಿ, ನಗರ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಖಿಲ್ ಸಾಮೆತ್ತಡ್ಕ, ಉದ್ಯಮಿ ನಿಹಾಲ್ ಶೆಟ್ಟಿ, ಪ್ರಗತಿಪರ ಕೃಷಿಕರಾದ ರಾಕೇಶ್ ಬಡಗನ್ನೂರು, ಅಶ್ವಿನ್ ಬಡಗನ್ನೂರು ಮತ್ತಿತರರು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here