ನಾಳೆ (ಆ.8) ಪುಣಚ ಗ್ರಾಮಸಭೆ

0

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಆ.8 ರಂದು ಬೆಳಿಗ್ಗೆ ಪುಣಚ ಗ್ರಾಮ ಪಂಚಾಯತ್‌ನ ಸುವರ್ಣ ಸೌಧ ಸಭಾಂಗಣದಲ್ಲಿ ನಡೆಯಲಿದೆ.

ಬಂಟ್ವಾಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ, ಅರ್ಜಿಗಳನ್ನು ನೀಡುವಂತೆ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು, ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ ಗೌಡ, ಅಭಿವೃದ್ಧಿ ಅಧಿಕಾರಿ ರವಿ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಪಾರ್ವತಿ ಕೆ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದವರ ಪ್ರಕಟಣೆ ತಿಳಿಸಿದೆ. ಪಂಚಾಯತ್‌ಗೆ ಪಾವತಿಸಬೇಕಾದ ಭೂಮಿ ತೆರಿಗೆ, ಕಟ್ಟಡ ತೆರಿಗೆ, ನೀರಿನ ಶುಲ್ಕ, ಘನತ್ಯಾಜ್ಯ ವಿಲೇವಾರಿ ಶುಲ್ಕಗಳನ್ನು ಕ್ಲಪ್ತ ಸಮಯದಲ್ಲಿ ಪಂಚಾಯತ್‌ಗೆ ಪಾವತಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಪಂಚಾಯತ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here