ನಾಳೆ(ಆ.8): ಕಾಣಿಯೂರಿನಲ್ಲಿ 1700ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ

0

ಕಾಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕಾಣಿಯೂರು ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ 1700 ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭವು ಆ.8ರಂದು ನಡೆಯಲಿದೆ.

ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಉಡುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ದಕ್ಷಿಣ ಕನ್ನಡ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ. ಭಾಸ್ಕರ ಕೋಡಿಂಬಾಳ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಸೀತಾರಾಮ ಪೊಸವಳಿಕೆ, ಕಡಬ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಅಧ್ಯಕ್ಷ ಸಂತೋಷ್ ಕೆ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here