ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಗೃಹಜ್ಯೋತಿ ಯೋಜನೆಯ ಅಧಿಕೃತ ಚಾಲನಾ ಕಾರ್ಯಕ್ರಮ ಆ.11 ರಂದು ಪುತ್ತೂರಿನಲ್ಲಿ ನಡೆಯಲಿದೆ.
ಪುತ್ತೂರಿನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಸಂಬಂಧ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಪುತ್ತೂರು ನಗರ ಸಹಾಯಕ ಇಂಜಿನಿಯರ್ ರಾಜೇಶ್,ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ,ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ,ಪುತ್ತೂರು ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಮ್ ಕೆ ಬಿ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್ ಉಪಸ್ಥಿತರಿದ್ದರು.