ಸೇಡಿಯಾಪು: ಅಪಘಾತದಿಂದ ಮೃತಪಟ್ಟ ಕುಟುಂಬಕ್ಕೆ ಶಾಸಕರಿಂದ ಸಹಾಯಧನ

0

ಪುತ್ತೂರು: ಕಳೆದ ಕೆಲವು ದಿನಗಳ ಹಿಂದೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಮೃತಪಟ್ಟಿದ್ದ ಸೇಡಿಯಾಪು ನಿವಾಸಿ ಚೈತ್ರೇಶ್ ರವರ ಕುಟುಂಬಕ್ಕೆ ಪುತ್ತೂರು ಶಾಸಕ ಅಶೋಕ್ ರೈಯವರು ಸಹಾಯಧನವನ್ನು ವಿತರಿಸಿದರು.

ಅಪಘಾತದಿಂದ ಮೃತಪಟ್ಟ ಯುವ ಚೈತ್ರೇಶ್ ರವರ ತಾಯಿ ಮಂಜುಳಾ ಅವರಿಗೆ ಶಾಸಕರು ರೂ.25ಸಾವಿರ ಮೊತ್ತವನ್ನು ವೈಯಕ್ತಿಕ ನೆಲೆಯಲ್ಲಿ ವಿತರಿಸಿದರು. ಚೈತ್ರೇಶ್ ಮನೆಗೆ ಭೇಟಿ ನೀಡಿದ್ದ ಶಾಸಕರು ಅವರ ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ಕಂಡು ತನ್ನ ವೈಯಕ್ತಿಕ ನೆಲೆಯಲ್ಲಿ ಸಹಾಯ ಮಾಡುವುದಾಗಿ ಹೇಳಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್ ಸಹಿತ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here