ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸ್ವೀಕಾರ

0

ಪುತ್ತೂರು: ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಜು.28ರಂದು ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಶಾಲೆಯ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಂತ್ರಿ ಮಂಡಲವು ಮಹತ್ವವಾದ ಪಾತ್ರವನ್ನು ವಹಿಸುವುದು ಮಾತ್ರವಲ್ಲದೆ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ ಎಂದು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ನಿರ್ದೇಶಕ ಬಿ.ಕೆ ರವೀಂದ್ರ ಅವರು ಹೇಳಿದರು.
ಶಾಲಾ ಸಂಚಾಲಕ ಭರತ್ ಪೈ ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು.
ಪ್ರಾಂಶುಪಾಲೆ ಸಿಂಧೂ ವಿ.ಜಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲೆ ಹೇಮಾವತಿ ಎಂ.ಎಸ್ ಅವರು ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಶಿಕ್ಷಕಿ ಸಾಯಿಗೀತಾ ಎಲ್ಲರನ್ನೂ ಸ್ವಾಗತಿಸಿದರು ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಿರಿ ವಂದಿಸಿದರು. ಸಹಶಿಕ್ಷಕಿ ರೇಷ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಗೆ ಶಾಂತಿಮಂತ್ರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here