ಡೆಂಗೀ ತಡೆಯಲು ಮಾಹಿತಿ ಅಗತ್ಯ – ಡೆಂಗೀ ಜಾಗೃತಿ ರಥಕ್ಕೆ ಚಾಲನೆ ನೀಡಿ ಜಿ.ಪಂ.ಸಿಇಒ ಡಾ.ಆನಂದ

0

ಮಂಗಳೂರು: ಡೆಂಗೀ ರೋಗ ತಡೆಗಟ್ಟುವ ಸಲುವಾಗಿ ಅದರ ಬಗ್ಗೆ ವ್ಯಾಪಕ ಮಾಹಿತಿ ನೀಡುವ ಅಗತ್ಯವಿದೆ ಎಂದು ದ.ಕ.ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಹೇಳಿದರು.

ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಪತ್ರಿಕಾ ಭವನದ ಮುಂದೆ ಡೆಂಗೀ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಸಂಚರಿಸಲು ನಿರ್ಮಿಸಲಾದ ಡೆಂಗೀ ಜಾಗೃತಿ ರಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡೆಂಗೀ ಕೇವಲ ಜ್ವರ ಅಲ್ಲ, ಅದು ಸೋಂಕು ಹೊಂದಿದ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ಅಗತ್ಯವಿದೆ ಎಂದು ಡಾ.ಆನಂದ ಕೆ. ತಿಳಿಸಿದರು. ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕಿಶೋರ್, ಐಎಂಎ ಮಂಗಳೂರು ಘಟಕದ ಅಧ್ಯಕ್ಷ ಡಾ.ವೇಣುಗೋಪಾಲ, ಗ್ರಾಪಂ ಅಧ್ಯಕ್ಷ ಡಾ.ರಂಜನ್, ಖಜಾಂಚಿ ಡಾ.ನಂದಕಿಶೋರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಖಜಾಂಚಿ ಪುಷ್ಪರಾಜ್ ಬಿ.ಎನ್, ನಿಸರ್ಗ ಪಬ್ಲಿಸಿಟಿಯ ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here