ಉಪ್ಪಿನಂಗಡಿ: ಸಾರ್ವಜನಿಕ ಶಾಂತಿ ಭಂಗ ಆರೋಪಿಗಳು ದೋಷಮುಕ್ತ

0

ಪುತ್ತೂರು:ಸುಮಾರು 7 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದುಕೊಂಡು, ಕೈಕೈ ಮಿಲಾಯಿಸಿ ಸಾರ್ವಜನಿಕ ಶಾಂತಿಭಂಗ ಉಂಟು ಮಾಡಿದ್ದ ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.


ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿಯ ರೆಹಮಾನ್ ವಾಣಿಜ್ಯ ಸಂಕೀರ್ಣದ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ 2016ರ ದ.27 ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಆರೋಪಿಗಳು ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದು, ಕೈ ಮಿಲಾಯಿಸಿಕೊಂಡು ಸಾರ್ವಜನಿಕ ಶಾಂತಿ ಭಂಗ ಮಾಡಿರುತ್ತಾರೆ ಎಂಬ ಆರೋಪದಡಿಯಲ್ಲಿ ಮಹಮ್ಮದ್ ಅಶ್ರಫ್, ಮೂಸಮುಸ್ತಫಾ, ಅಬ್ದುಲ್ ರಹಿಮಾನ್ ಎಂಬವರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯವರು ಪ್ರಕರಣದ ತನಿಖೆಯನ್ನು ಮಾಡಿ ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಅಭಿ ಯೋಜನೆಯ ಪರ ಏಳು ಸಾಕ್ಷಿಗಳನ್ನು ವಿಚಾರಣೆ ನಡೆಸಿ ಸುಮಾರು 5 ದಾಖಲೆಗಳನ್ನು ಗುರುತಿಸಿಕೊಂಡಿರುತ್ತಾರೆ. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯದ ನ್ಯಾಯಾಧೀಶ ಶಿವಣ್ಣ ಎಚ್.ಆರ್.ಅವರು ಆರೋಪಿಗಳನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ್ದಾರೆ. ಒಂದನೇ ಆರೋಪಿ ಮಹಮ್ಮದ್ ಅಶ್ರಫ್‌ರವರ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ಮತ್ತು 2, 3ನೇ ಆರೋಪಿಗಳ ಪರ ನ್ಯಾಯವಾದಿ ಕೆ.ಎಂ.ಸಿದ್ದೀಕ್ ವಾದಿಸಿದ್ದರು.

LEAVE A REPLY

Please enter your comment!
Please enter your name here