ಮಾಣಿ: ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡ್, ಇತರ ಸಾಮಾಗ್ರಿ ಕಳವು – ಪ್ರಕರಣ ದಾಖಲು

0

ವಿಟ್ಲ : ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಾಣಿಯಲ್ಲಿ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಬಿ ಮೂಡ ಗ್ರಾಮದ ನಿವಾಸಿ, ಕೆ.ಎನ್.ಆರ್ ಕನ್ಸ್ಟ್ರಕ್ಷನ್ ಕಂಪೆನಿಯಲ್ಲಿ ಪಿ.ಆರ್.ಒ ಆಗಿ ಕೆಲಸ ನಿರ್ವಹಿಸುತ್ತಿರುವ ಆರ್. ನಂದಕುಮಾರ್ ಪ್ರಕರಣದ ದೂರುದಾರರಾಗಿದ್ದಾರೆ.

ಬಂಟ್ವಾಳ ತಾಲೂಕು ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸ ಮಾಡಲು ತಂದಿಟ್ಟಿದ್ದ ರಾಡುಗಳು, ಪ್ಲೇಟ್ಸ್ ಹಾಗೂ ಇತರ ಸಾಮಾಗ್ರಿಗಳು ಆ.7 ರಂದು ನೋಡಿದಾಗ ಕಳ್ಳತನವಾಗಿದ್ದು, ಸಾಮಾಗ್ರಿಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂದಿದ್ದು, ನಂದಕುಮಾರ್ ರವರನ್ನು ಕಂಡ ಆರೋಪಿ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿರುತ್ತಾನೆ.

ಕಳ್ಳತನವಾದ ರಾಡ್ ಹಾಗೂ ಇತರ ಸಾಮಾಗ್ರಿಗಳ ಒಟ್ಟು ಮೌಲ್ಯ 3,50,000 ರೂ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here