ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ಸ್ವತಂತ್ರ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ಯುವ ವಿದ್ಯಾರ್ಥಿ ಸಬಲೀಕರಣ ಕಾರ್ಯಾಗಾರವು ಮಂಗಳೂರು ರಿಫೈನರಿ ಹಾಗೂ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ಇ ಇದರ ಸಹಭಾಗಿತ್ವದಲ್ಲಿ ನಡೆಯಿತು.
ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿವಿ ಸೂರ್ಯನಾರಾಯಣ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಸಂಬಂಧಿತ ವಿಷಯಗಳ ಕುರಿತು
ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಶಸ್ಸಿಗಾಗಿ ಗುರಿ, ದೂರದರ್ಶಿತ್ವ ಮತ್ತು ಅವಿರತ ಪ್ರಯತ್ನಗಳು ಸಾಧನವಾಗಬೇಕು ಎಂದರು. ಸಮಾರಂಭದಲ್ಲಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್ ಕೆ ಪ್ರಕಾಶ್ ಹಾಗೂ ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಉಪಸ್ಥಿತರಿದ್ದರು. ಉಪನ್ಯಾಸಕಿಯಾದ ಸ್ವಾತಿ ಬಿಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.