ಪುತ್ತೂರು: ಪುತ್ತೂರಿನ ಶರ್ಮಹಾನ್ ಸೊಸೈಟಿಯ ಅಧ್ಯಕ್ಷರಾಗಿದ್ದ ಗಿರೀಶ್ ಶರ್ಮ ಅವರ ತಂದೆ ಗಣೇಶ್ ಶರ್ಮ(60ವ)ರವರು ಮನೆಯ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.8ರಂದು ನಡೆದಿದೆ.
ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ ಕಾಯರ್ಕಾಡ್ ನಿವಾಸಿ ಗಣೇಶ್ ಶರ್ಮ ಅವರು ಮನೆಯ ಹಿಂಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತರು ಪತ್ನಿ, ಪುತ್ರ ಗಿರೀಶ್ ಶರ್ಮ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.