ಮರ್ದಾಳ: ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರರಿಗೆ ಗಾಯ

0

ಕಡಬ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ತೆರಳಿದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಕಡಬ ತಾಲೂಕಿನ ಕೊಂಬಾರು ನಿವಾಸಿ ಚಿದಾನಂದ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ‌. ಅಪರಿಚಿತ ಕಾರು ಢಿಕ್ಕಿ ಹೊಡೆದು ಪರಾರಿಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ವಾಹನದ ಪತ್ತೆಗೆ ಬಲೆ‌ ಬೀಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here