ಕಾಣಿಯೂರು : ಸುಳ್ಯ ತಾಲೂಕಿನ ಮುರುಳ್ಯ ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ವನಿತಾ ಸುವರ್ಣ, ಉಪಾಧ್ಯಕ್ಷರಾಗಿ ಕು. ಜಾನಕಿ ಮುರುಳ್ಯ ಅವಿರೋಧ ಆಯ್ಕೆಯಾಗಿದ್ದಾರೆ.
ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ವನಿತಾ ಸುವರ್ಣರು ಈ ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷತೆಗೆ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಜಾನಕಿ ಮುರುಳ್ಯ ನಾಮಪತ್ರ ಸಲ್ಲಿಸಿದ್ದು, ಇಬ್ಬರೂ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾಧಿಕಾರಿಯಾಗಿ ಪಂಜ ವಲಯಾರಣ್ಯಾಧಿಕಾರಿ ಮಂಜುನಾಥ್ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ರೈ ಅವರು ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು.