ಪುತ್ತೂರು ನಗರಸಭೆಯಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಬೀದಿ ನಾಟಕ ಪ್ರದರ್ಶನ

0

ಪುತ್ತೂರು: ಪ್ಲಾಸ್ಟಿಕ್‌ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಪುತ್ತೂರು ನಗರಸಭೆಯಿಂದ ‘ಏಕ ಬಳಕೆಯ ಪ್ಲಾಸ್ಟಿಕ್ ಬೇಡ’ ಎಂಬ ಸಂದೇಶ ಸಾರಲು ಬೀದಿ ನಾಟಕಗಳನ್ನು ಆಯೋಜಿಸಿದ್ದು, ವಿಧಾತ್ರಿ ಕಲಾವಿದೆರ್ ಕೈಕಂಬ ಅವರಿಂದ ನಗರಸಭೆಯ ವಿವಿಧ ಕಡೆಗಳಲ್ಲಿ ಬೀದಿ ನಾಟಕ ಪ್ರದರ್ಶನಗೊಂಡಿತ್ತು.


ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿ ಪ್ಲಾಸ್ಟಿಕ್-ಮುಕ್ತ ಭಾರತ್ ಎಂಬ ಶೀರ್ಷಿಕೆಯಡಿಯಲ್ಲಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜನಜಾಗೃತಿ ಅಭಿಯಾನದ ಭಾಗವಾಗಿ ಇಲಾಖೆಯು ಇಂತಹ ಬೀದಿ ನಾಟಕಗಳನ್ನು ವಿವಿಧ ಭಾಗಗಳಲ್ಲಿ ಆಯೋಜಿಸುತ್ತದೆ. ಏಕ-ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ತ್ಯಜಿಸಲು ಜನರಿಗೆ ತಿಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಬೆ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ವೇತಾ ಕಿರಣ್, ರಾಮಚಂದ್ರ, ವರಲಕ್ಷ್ಮೀ, ಕಚೇರಿ ಮೆನೇಜರ್ ಪಿಯೂಸ್ ಡಿಸೋಜ, ಕಂದಾಯ ನಿರೀಕ್ಷಕ ರಾಜೇಶ್ ನಾಕ್, ಸಿ.ಆರ್ ದೇವಾಡಿಗ, ಕರುಣಾಕರ ಕುಲಾಲ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪುತ್ತೂರು ನಗರಸಭೆ ವ್ಯಾಪ್ತಿಯ 10 ಕಡೆಗಳಲ್ಲಿ ಬೀದಿ ನಾಟಕ ಪ್ರದರ್ಶನಗೊಳಿಸಲಾಯಿತು.

LEAVE A REPLY

Please enter your comment!
Please enter your name here