





ಬೆಳ್ಳಾರೆ : ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುಹಾಸ್ ಆರ್. ಅವರಿಗೆ ವರ್ಗಾವಣೆಯಾಗಿದೆ. ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಎಸ್‌ಐ ಆಗಿ ಸಂತೋಷ್ ಬಿ.ಪಿ.ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ.


ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಎಸ್‌ಐ ಆಗಿದ್ದ ಸಂತೋಷ್ ಅವರಿಗೆ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದೆ. ಒಂದು ವರ್ಷದ ಹಿಂದೆ ಸುಹಾಸ್ ಆರ್. ಅವರು ಬೆಳ್ಳಾರೆ ಪೊಲೀಸ್ ಠಾಣೆಯ ಎಸ್‌ಐ ಆಗಿ ಆಗಮಿಸಿದ್ದರು.





ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಾಗೂ ಅಹಿತಕರ ಘಟನೆಯ ಬಳಿಕ ಬೆಳ್ಳಾರೆ ಠಾಣಾ ಎಸೈ ಆಗಿದ್ದ ರುಕ್ಮ ನಾಯ್ಕ್ ಅವರಿಗೆ ವರ್ಗಾವಣೆಯಾಗಿ ಕುಂದಾಪುರದಲ್ಲಿ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.







