ಪಡುಬೆಟ್ಟು ದೇವಸ್ಥಾನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕಟ್ಟೆಮಜಲು ಒಕ್ಕೂಟದ ವತಿಯಿಂದ ಪಡುಬೆಟ್ಟು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಸಿ ವಿತರಣೆ ಮತ್ತು ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು.


ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಆದಿತ್ಯ ಭಟ್, ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಶಬರಾಯ, ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಭಟ್, ನೆಲ್ಯಾಡಿ ವಲಯ ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ಹಾರ್ಪಳ, ಕಡಬ ತಾಲೂಕು ಕೃಷಿ ಮೇಲ್ವಿಚಾರಕ ಸೋಮೇಶ್, ನೆಲ್ಯಾಡಿ ವಲಯ ಮೇಲ್ವಿಚಾರಕ ವಿಜೇಶ್ ಜೈನ್, ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿ.ಸೋಜರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ನೆಲ್ಯಾಡಿ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಒಕ್ಕೂಟದ ಮಾಜಿ ಅಧ್ಯಕ್ಷೆ ಸವಿತಾ, ಆಡಳಿತ ಮಂಡಳಿ ಸದಸ್ಯ ಕಾಂತಪ್ಪ ಪೂವಾಜೆ, ಜನಜಾಗೃತಿ ವೇದಿಕೆ ಸದಸ್ಯ ತುಕಾರಾಮ ರೈ, ಸೇವಾಪ್ರತಿನಿಧಿ ನಮಿತಾ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಾರ್ಸೆಲ್ ಡಿ.ಸೋಜಾ ಸ್ವಾಗತಿಸಿ, ಸೇವಾಪ್ರತಿನಿಧಿ ಸುಮನಾ ವಂದಿಸಿದರು. ಹೇಮಾವತಿ ಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here