ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷರಾಗಿ ಸುಜಾತಾ ಕಲ್ಲಾಜೆ,ಉಪಾಧ್ಯಕ್ಷರಾಗಿ ಎಚ್.ಎಲ್.ವೆಂಕಟೇಶ್

0

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ  ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷತೆ ಸ್ಥಾನಕ್ಕೆ  ಆ.10ರಂದು ಚುನಾವಣೆ ನಡೆದಿದ್ದು,ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಏನೆಕಲ್ಲು ಗ್ರಾಮದ ದೇವರಹಳ್ಳಿ ವಾರ್ಡ್ ನ ಸುಜಾತಾ ಕಲ್ಲಾಜೆ ಹಾಗೂ ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯ ಎರಡನೇ ವಾರ್ಡಿನ ಸದಸ್ಯ ವೆಂಕಟೇಶ್ ಎಚ್.ಎಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.  ಈ ಇಬ್ಬರೂ ಬಿಜೆಪಿ ಬೆಂಬಲಿತ ಸದಸ್ಯರು ಚುನಾವಣಾ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸುಬ್ರಹ್ಮಣ್ಯ ಉಪ ವಿಭಾಗದ ಎ.ಇ.ಇ ಪ್ರಮೋದ್ ಕುಮಾರ್ ಕೆ. ಆಗಮಿಸಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿ. ಡಿ. ಓ ಆಕಾಶ್ ಹಾಗೂ  ಕಾರ್ಯದರ್ಶಿ ಮೋನಪ್ಪ ಸಹಕರಿಸಿದರು.ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here