ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

0

ಸವಣೂರು : ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರ ಆದೇಶದನ್ವಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ .

ಸಮಿತಿಯ ಅಧ್ಯಕ್ಷರಾಗಿ ರೂಪಕಲಾ ಎಂ ಇವರು ಕಾರ್ಯನಿರ್ವಹಿಸಲಿದ್ದಾರೆ. ಈ ಸಮಿತಿಯ ಸದಸ್ಯರಾಗಿ 15 ವಿಧಾನಸಭಾ ಸದಸ್ಯರು ಹಾಗೂ 5 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here