ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿ ಆಯ್ಕೆಯಾದ ಫಲಾನುಭವಿಗಳಿಗೆ ಆ.11ರಂದು ಪುತ್ತೂರು ನಗರಸಭೆಯಲ್ಲಿ ಸ್ವ ನಿಧಿಯಿಂದ ಸಮೃದ್ಧಿ ಮೇಳ ಮತ್ತು ಮೈ ಬೀ ಡಿಜಿಟಲ್ ಕಾರ್ಯಕ್ರಮ ನಡೆಯಿತು.
ಪೌರಾಯುಕ್ತ ಮಧು ಎಸ್ ಮನೋಹರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಕೌಶಲ್ಯ ಅಭಿಯಾನ ವ್ಯವಸ್ಥಾಪಕಿ ಐರಿನ್ ರೆಬೆಲ್ಲೊ,
ತಾಲೂಕು ಆಹಾರ ಶಿರಸ್ತೆದಾರ ಸರಸ್ವತಿ, ಹಿರಿಯ ಕಾರ್ಮಿಕ ನಿರೀಕ್ಷಕ ಗಣಪತಿ ಹೆಗ್ಡೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪದ್ಮಾವತಿ, ಕೆನರಾ ಬ್ಯಾಂಕ್, ಬ್ಯಾಂಕ್ ಆಪ್ ಬರೋಡಾ, ಯುನಿಯನ್ ಬ್ಯಾಂಕ್,, ಕರ್ಣಾಟಕ ಬ್ಯಾಂಕ್, ಗ್ರಾಮೀಣ ವಿಕಾಸ ಬ್ಯಾಂಕ್, ಎಸ್ ಬಿ ಐ, ಗ್ರಾಮೀಣ ಬ್ಯಾಂಕ್, ಐಒಬಿಯ ಬ್ಯಾಂಕ್ ಪ್ರತಿಬಿಧಿಗಳು ವೇದಿಕಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಿರು ಸಾಲ ಸೌಲಭ್ಯ ಪಡೆದ ಎಲ್ಲಾ ಬೀದಿ ಬದಿ ವ್ಯಾಪಾರಿಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮತ್ತು ಕುಟುಂಬದ ಸದಸ್ಯರಿಗೆ ಪಿಎಂ ಸುರಕ್ಷಾ ವಿಮಾ ಯೋಜನೆ, ಪಿಎಂ ಜೀವನ ಜ್ಯೋತಿ ವಿಮಾ ಯೋಜನೆ, ಪಿಎಂ ಜನ್ ಧನ್ ಯೋಜನೆ, ಪಿಎಂ ಶ್ರಮ ಯೋಗಿ ಮಾನ್ ಧನ್ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ, ಬಿಒಸಿಡಬ್ಲ್ಯು ಅಡಿಯಲ್ಲಿ ನೋಂದಣಿ, ಜನನಿ ಸುರಕ್ಷಾ ಯೋಜನೆ ಮತ್ತು ಪಿಎಂ ಮಾತೃ ವಂದನಾ ಯೋಜನೆಗಳ ಸೌಲಭ್ಯ ವಿತರಣೆ ಮತ್ತು ಕಾರ್ಯಾಗಾರ ನಡೆಯಿತು. ನಗರಸಭೆಯ ಕರುಣಾಕರ್ ಕಾರ್ಯಕ್ರಮ ನಿರೂಪಿಸಿದರು.