ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷತೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎರಡೂ ಸ್ಥಾನ ಗಳಿಗೂ ಬಿಜೆಪಿ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಗೀತಾ ಹಾಗೂ ಉಪಾಧ್ಯಕ್ಷರಾಗಿ ಅಶೋಕ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದುಳಿದ ವರ್ಗ ಎ ಮಹಿಳಾ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಆರ್ಯಾಪು ವಾರ್ಡ್ 1 ರ ಬಿಜೆಪಿ ಬೆಂಬಲಿತ ಸದಸ್ಯೆ ಗೀತಾ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಕುರಿಯ ವಾರ್ಡ್ 1ರ ಬಿಜೆಪಿ ಬೆಂಬಲಿತ ಸದಸ್ಯ ಅಶೋಕ ನಾಯ್ಕ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು24 ಸ್ಥಾನಗಳನ್ನು ಹೊಂದಿರುವ ಪಂಚಾಯತ್ ನಲ್ಲಿ ಪ್ರಸ್ತುತ ಬಿಜೆಪಿ ಬೆಂಬಲಿತ-15, ಕಾಂಗ್ರೆಸ್ ಬೆಂಬಲಿತ-6 ಹಾಗೂ ಎಸ್.ಡಿ.ಪಿ.ಐ ಬೆಂಬಲಿತ-2 ಹಾಗೂ ಪುತ್ತಿಲ ಪರಿವಾರ ಬೆಂಬಲಿತ-1ಸ್ಥಾನಗಳನ್ನು ಹೊಂದಿದೆ.
ಸದಸ್ಯನಾಗಿಯು ಅವಿರೋಧವಾಗಿ ಆಯ್ಕೆಯಾಗಿದ್ದ ಅಶೋಕ್:
ಪಂಚಾಯತ್ ಗೆ 2020ರಲ್ಲಿ ನಡೆದ ಚುನಾವಣೆಯಲ್ಲಿ ಕುರಿಯ ವಾರ್ಡ್ 1 ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಶೋಕ್ ನಾಯ್ಕರವರು ಸದಸ್ಯರಾಗಿಯೂ ಅವಿರೋಧವಾಗಿ ಆಯ್ಕೆಯಾಗಿದ್ದರು.
ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಚುನಾವಣಾಧಿಕಾರಿಯಾಗಿದ್ದರು. ಪಿಡಿಓ ನಾಗೇಶ್ ಎಂ., ಕಾರ್ಯದರ್ಶಿ ಮೋನಪ್ಪ ಹಾಗೂ ಸಿಬ್ಬಂದಿಗಳು ಸಹಕರಿಸಿದರು.