




ಪುತ್ತೂರು: ವಿಶ್ವಹಿಂದೂ ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ಪುತ್ತೂರು ಇದರ ವತಿಯಿಂದ ಆ.14ರಂದು ಸಂಜೆ ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಮತ್ತು ಭಾರತ ಮಾತಾ ಪೂಜಾನಾ ಹಾಗು ನಿವೃತ್ತ ಯೋಧದರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.



ಸಂಜೆ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಬಳಿಯ ಸುಬ್ರಹ್ಮಣ್ಯ ನಗರದಿಂದ ಪಂಜಿನ ಮೆರವಣಿಗೆಯು ಕಿಲ್ಲೇ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ತೆರಳಿ ಅಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಸೀತಾರಾಮ ರೈ ಕೈಕಾರ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.












