ಮುಂಡೂರು: ವರ್ಗಾವಣೆಗೊಂಡ ಪಿಡಿಓ ಗೀತಾ ಬಿ.ಎಸ್ ರಿಗೆ ಗ್ರಾ.ಪಂ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ

0

ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಗೀತಾ ಬಿಎಸ್ ಅವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಗ್ರಾ.ಪಂ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಆ.11ರಂದು ನಡೆಯಿತು.


ಗ್ರಾ.ಪಂ ಸದಸ್ಯ ಅಶೋಕ್ ಕುಮಾರ್ ಪುತ್ತಿಲ ಮಾತನಾಡಿ ಪಿಡಿಓ ಗೀತಾ ಬಿ.ಎಸ್ ಅವರು ಕಳೆದ ಎರಡೂವರೆ ವರ್ಷಗಳಿಂದ ನಿಸ್ವಾರ್ಥವಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಎನ್ ಮಾತನಾಡಿ ಪಿಡಿಓ ಗೀತಾ ಬಿ.ಎಸ್ ಅವರು ಆತ್ಮೀಯವಾದ ಒಡನಾಟದಿಂದ್ದು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು ಮತ್ತು ವಿಳಂಬ ನೀತಿ ತೋರದೆ ಕೆಲಸ ಕಾರ್ಯಗಳನ್ನು ನಡೆಸಿಕೊಡುತ್ತಿದ್ದರು ಎಂದು ಹೇಳಿದರು.

ಸದಸ್ಯರಾದ ಕರುಣಾಕರ ಗೌಡ ಎಲಿಯ, ಕಮಲೇಶ್ ಎಸ್.ವಿ ಹಾಗೂ ಚಂದ್ರಶೇಖರ್ ಎನ್‌ಎಸ್‌ಡಿ ಮಾತನಾಡಿ ಶುಭ ಹಾರೈಸಿದರು. ಕಾರ್ಯದರ್ಶಿ ಸೂರಪ್ಪ ಹಾಗೂ ಸಿಬ್ಬಂದಿಗಳು ಅನಿಸಿಕೆ ವ್ಯಕ್ತಪಡಿಸಿದರು. ಗ್ರಾ.ಪಂ ಪ್ರಭಾರ ಪಿಡಿಓ ಅಜಿತ್, ಉಪಾಧ್ಯಕ್ಷೆ ಪ್ರೇಮಾ ಎಸ್ ಹಾಗೂ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ಗ್ರಾ.ಪಂ ಕ್ಲರ್ಕ್ ಶಶಿಧರ್ ಕೆ ಮಾವಿನ ಕಟ್ಟೆ ನಿರೂಪಿಸಿದರು. ಗ್ರಾ.ಪಂ ಸಿಬ್ಬಂದಿಗಳಾದ ಕೊರಗಪ್ಪ ನಾಯ್ಕ, ಸತೀಶ್ ಹೆಚ್, ಮೋಕ್ಷ ಎನ್ ಹಾಗೂ ಕವಿತಾ ಎಂ.ಎಸ್ ಸಹಕರಿಸಿದರು.

LEAVE A REPLY

Please enter your comment!
Please enter your name here