ಕಾಣಿಯೂರು: ಇತಿಹಾಸ ಪ್ರಸಿದ್ಧ ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಕೇಪುಳೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪೂರ್ವಭಾವಿ ಸಭೆಯು ಆ.13ರಂದು ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ದೇವಸ್ಥಾನದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರು, ಅರ್ಚಕ ಜನೇಶ್ ಭಟ್ ಬರೆಪ್ಪಾಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಮಾಜಿ ಸಚಿವ ಎಸ್ ಅಂಗಾರ, ಕಾರ್ಯಾಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಉಪಾಧ್ಯಕ್ಷ ಸಂಪತ್ ರೈ ಪಾತಾಜೆ, ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಕೋಶಾಧಿಕಾರಿ ಕೃಷ್ಣ ಭಟ್ ಬರೆಪ್ಪಾಡಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಬೈಲುವಾರು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸೈನಿಕನಾಗಿ ಸೇವೆಗೆ ನೇಮಕಗೊಂಡ ಭವನ್ ಕುಮಾರ್ ಎ. ಕೆ.ಅಮೈ ಅವರು
ತನ್ನ ಮೊದಲ ವೇತನವನ್ನು ಕ್ಷೇತ್ರದ ಜೀರ್ಣೋದ್ದಾರ ಕಾರ್ಯಕ್ಕಾಗಿ ನೀಡಿದರು.