ಕೊಡಂಗಾಯಿ: ಆಟೋ ಪಲ್ಟಿ, ಚಾಲಕ ಗಂಭೀರ

0

ವಿಟ್ಲ : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯೊಂದನ್ನು ಪ್ರಾಣ ಉಳಿಸುವ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ಪಲ್ಟಿಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದ್ದು, ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53 ವ) ಗಾಯಗೊಂಡವರಾಗಿದ್ದಾರೆ. ವಿಟ್ಲ ಭಾಗದಿಂದ ಸಾಲೆತ್ತೂರಿಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ ಬದಿಯಲ್ಲಿ ರಸ್ತೆ ದಾಟುತ್ತಿದ್ದ ಮುಂಗುಸಿಯೊಂದು ಅಡ್ಡಬಂದಿದೆ. ಮುಂಗುಸಿಯ ಪ್ರಾಣ ರಕ್ಷಣೆಗಾಗಿ ಚಾಲಕ ಹಠಾತ್ ಬ್ರೇಕ್ ಹಾಕುತ್ತಿದ್ದಂತೆ ನಿಯಂತ್ರಣ ತಪ್ಪಿದ ಆಟೋ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಬಲವಾಗಿ ಅಪ್ಪಳಿಸಿ ಜಖಂಗೊಂಡಿದ್ದು ಚಾಲಕ ಇಸ್ಮಾಯಿಲ್ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯರು ವಿಟ್ಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here