ಪುತ್ತೂರು: ವಾಣಿಯನ್/ಗಾಣಿಗ ಸಮಾಜ ಸೇವಾ ಸಂಘ ಪುತ್ತೂರು ಇದರ ವತಿಯಿಂದ 8ನೇ ವರ್ಷದ ಆಟಿಕೂಟ ಹಾಗೂ ಸಮಾಜ ಬಾಂಧವರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಆ.13ರಂದು ನೆಲ್ಲಿಕಟ್ಟೆ ಈಶ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು.
ಸಮಾಜದ ಹಿರಿಯರಾದ ಪರಮೇಶ್ವರಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಸುಬ್ಬಪ್ಪ ಪಾಟಾಳಿ ಪಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪೆರಾಬೆ ಗ್ರಾ. ಪಂ ಮಾಜಿ ಅಧ್ಯಕ್ಷೆ ಬೇಬಿ ಚಂದ್ರಶೇಖರ ಪಾಟಾಳಿಯವರು ಆಟಿ ತಿಂಗಳ ಮಹತ್ವದ ಬಗ್ಗೆ ತಿಳಿಸಿದರು.
ಸಂಘದ ನಿಯೋಜಿತ ಅಧ್ಯಕ್ಷ ಪ್ರಸಾದ್ ಬಿ.ಕಲ್ಲರ್ಪೆ, ಮಹಾಲಿಂಗ ಪಾಟಾಳಿ ಕೂಟೇಲು , ರಾಜೀವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜ ಬಾಂಧವರು ತಮ್ಮ ಮನೆಯಲ್ಲಿ ತಯಾರಿಸಿ ತಂದಿದ್ದ 35ಕ್ಕೂ ಅಧಿಕ ಬಗೆಯ ಆಟಿಯ ತಿನಿಸುಗಳೊಂದಿಗೆ ಸಹಭೋಜನ ನಡೆಯಿತು.
ಸಂಘದ ಸ್ಥಾಪಕಾಧ್ಯಕ್ಷ ತಿಮ್ಮಪ್ಪ ಪಾಟಾಳಿ ,ಪುತ್ತೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅಪ್ಪು ಪಾಟಾಳಿ, ಪುತ್ತೂರು ಮಹಿಳಾ ಪೋಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದಿನೇಶ್ ಕಡಮಜಲು, ನಿವೃತ್ತ ಯೋಧ ಬಾಲಕೃಷ್ಣ ಪಾಟಾಳಿ, ಈಶ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಗೋಪಾಲಕೃಷ್ಣ ಎಂ., ಸಂಘದ ಪೂರ್ವಾಧ್ಯಕ್ಷರುಗಳು,ಸದಸ್ಯರು ಸೇರಿದಂತೆ ನೂರಾರು ಮಂದಿ ಸಮಾಜ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಂಘದ ಕಾರ್ಯದರ್ಶಿ ಮಹೇಶ್ ಆಲಂಕಾರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಜಯಲಕ್ಷ್ಮೀ ಡಿ.ಎಸ್ ವಂದಿಸಿದರು.