ಪುತ್ತೂರು: 2012ರಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಕೋರ್ಟ್ ಆರೋಪಿ ಸಂತೋಷ್ ನಿರಪರಾಧಿ ಎಂದು ಬಿಡುಗಡೆಗೊಳಿಸಿದೆ. ನಿಜವಾದ ಅಪರಾಧಿ ಯಾರೆನ್ನುವ ಬಗ್ಗೆ ಸರಕಾರ ಪ್ರಕರಣದ ಮರು ತನಿಖೆ ನಡೆಸಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಕೋರಿ, ಪುತ್ತಿಲ ಪರಿವಾರದ ಸದಸ್ಯರು ಅರುಣ್ ಕುಮಾರ್ ಪುತ್ತಿಲ ನೇತೃತ್ವದಲ್ಲಿ ಸಹಾಯಕ ಕಮಿಷನರ್ ಕಛೇರಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
