ನಿಡ್ಪಳ್ಳಿ ಗ್ರಾಮ ಪಂಚಾಯತ್ -ಅಧ್ಯಕ್ಷರಾಗಿ ವೆಂಕಟ್ರಮಣ ಬೋರ್ಕರ್, ಉಪಾಧ್ಯಕ್ಷರಾಗಿ ಸೀತಾ ಆಯ್ಕೆ

0

ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನ  ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ನಡೆದು ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿ ಹಾಲಿ ಉಪಾಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬ್ರಹ್ಮರಗುಂಡ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿ ಸೀತಾ ಅವಿರೋಧವಾಗಿ ಆಯ್ಕೆಯಾದರು.

ಒಟ್ಟು 9 ಸದಸ್ಯ ಬಲ ಹೊಂದಿರುವ ಗ್ರಾ.ಪಂನಲ್ಲಿ 5 ಬಿ.ಜೆ.ಪಿ ಹಾಗೂ 4 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮೀಸಲಾತಿ ಬಂದಿತ್ತು.ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ  ವೆಂಕಟ್ರಮಣ ಬೋರ್ಕರ್ ಮತ್ತು ತುಳಸಿ ಇಬ್ಬರೂ ಆರ್ಹರಾಗಿದ್ದು ಆಯ್ಕೆ ಬಯಸಿ ಇಬ್ಬರೂ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣೆ ನಡೆಯಿತು.ಚುನಾವಣೆಯಲ್ಲಿ ವೆಂಕಟ್ರಮಣ ಬೋರ್ಕರ್ 5 , ತುಳಸಿ 4 ಮತ ಪಡೆದ ಕಾರಣ ವೆಂಕಟ್ರಮಣ ಬೋರ್ಕರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.ಪಿಡಬ್ಲೂಡಿ ಇಂಜಿನಿಯರ್ ಕನಿಷ್ಕ ಎಸ್ ಚಂದ್ರ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಿಡಿಒ ಸಂಧ್ಯಾಲಕ್ಷ್ಮಿ, ಸಿಬ್ಬಂದಿ ವಿನೀತ್ ಕುಮಾರ್ ಸಹಕರಿಸಿದರು.

LEAVE A REPLY

Please enter your comment!
Please enter your name here