ಒಳಮೊಗ್ರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರು ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಂಚಪ್ರಾಣ ಶಪಥ ಕೈಗೊಳ್ಳಲಾಯಿತು. ಗ್ರಾ.ಪಂ ಕಟ್ಟಡದ ಆವರಣದಲ್ಲಿ ನೆಲ್ಲಿಕಾಯಿ ಗಿಡ ನೆಡಲಾಯಿತು. ಗ್ರಾ.ಪಂ ಕಾರ್ಯದರ್ಶಿ ಜಯಂತಿ, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಸದಸ್ಯರುಗಳಾದ ಸುಂದರಿ, ಶಾರದಾ, ಪ್ರದೀಪ್, ಶೀನಪ್ಪ ನಾಯ್ಕ, ನಳಿನಾಕ್ಷಿ, ವಿನೋದ್ ಶೆಟ್ಟಿ ಮುಡಾಲ, ಬಿ.ಸಿ ಚಿತ್ರಾ, ಸಿಬ್ಬಂದಿಗಳಾದ ಜಾನಕಿ, ಕೇಶವ, ಗುಲಾಬಿ, ಮೋಹನ್, ಗ್ರಂಥಪಾಲಕಿ ಸಿರಿನಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here