ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ‍್ಯಕ್ರಮ ಟ್ಯಾಲೆಂಟ್ ಶೋ-ಉದ್ಘಾಟನೆ

0

ಪುತ್ತೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ,ಸಂಗೀತ,ನೃತ್ಯ,ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತು ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ. ಹೊಸ ಹೊಸತಾದ ವಿಚಾರಗಳು, ಸಂಶೋಧನೆಗಳು ಜೀವನಕ್ಕೆ ಹೊಸ ರೂಪಗಳನ್ನು ಕೊಡುತ್ತದೆ. ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಜೊತೆ ಕಾರ‍್ಯದರ್ಶಿಗಳಾದ ರೂಪಲೇಖರವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ‍್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ. ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ ಎಂದು ಹೇಳಿದರು.
ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ಚಂದ್ರಶೇಖರ, ಭರತನಾಟ್ಯ ಮತ್ತು ಹವ್ಯಾಸಿ ಯಕ್ಷಗಾನ ಕಲಾವಿದರಾದ ಕು.ಶ್ರೇಯ, ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.

ಕಾರ‍್ಯಕ್ರಮದಲ್ಲಿ ಉಪನ್ಯಾಸಕಿ ಸೌಮ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here