ಪುಣಚ ಗ್ರಾಪಂನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನಲ್ಲಿ ಗ್ರಾ ಪಂ ಅಧ್ಯಕ್ಷೆ ಬೇಬಿಯವರು ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಂಚಪ್ರಾಣ ಶಪಥ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್.ಮಹಮ್ಮದ್, ಗ್ರಾಪಂ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಮಾಜಿ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು, ಮಾಜಿ ಉಪಾಧ್ಯಕ್ಷೆ ಪ್ರತಿಭಾ ಜಗನ್ನಾಥ ಗೌಡ, ಸದಸ್ಯರುಗಳಾದ ಗಂಗಮ್ಮ, ಉದಯ ದಂಬೆ, ಲಲಿತಾ, ಗಿರಿಜಾ, ಹರೀಶ್ ಪೂಜಾರಿ, ರವಿ ಅಲ್ಲದೆ ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿ ಸ್ವಾಗತಿಸಿ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಪಾರ್ವತಿ ವಂದಿಸಿದರು.

LEAVE A REPLY

Please enter your comment!
Please enter your name here