ಕೊಂಡಾಡಿಕೊಪ್ಪ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪದಲ್ಲಿ 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮೋಹನ ಕಮಿತ್ತಿಲು ಧ್ವಜಾರೋಹಣಗೈದರು.ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಲತಾ ಶರವೂರು ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ಆಲಂಕಾರು ಗ್ರಾಮ ಪಂಚಾಯತ್ ಸದಸ್ಯರಾದ ಸುಶೀಲ ಕೊಂಡಾಡಿ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೀನಪ್ಪ ಕುಂಬಾರ, ಮಾತೃಶ್ರೀ ಭಜನಾ ಮಂಡಳಿ ಕೊಂಡಾಡಿಕೊಪ್ಪ ಇದರ ಅಧ್ಯಕ್ಷರಾದ ಆರ್ ದಿವಾಕರ ಕುಂಬಾರ ಅಂಗನವಾಡಿ ಕಾರ್ಯಕರ್ತೆ ಹರಿಣಿ ಹಿರಿಯ ವಿದ್ಯಾರ್ಥಿ ವಿನೋದ್ ಉಪಸ್ಥಿತರಿದ್ದರು.ಶಾಲಾ ಮುಖ್ಯಗುರು ಜಯಂತ್ ವೈ ಸ್ವಾಗತಿಸಿ, ಸಹಶಿಕ್ಷಕಿ ಅಶ್ವಿನಿ ವಂದಿಸಿದರು.ಬಳಿಕ ಮಕ್ಕಳಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here