ನಿಡ್ಪಳ್ಳಿ: ದ.ಕ ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಿಡ್ಪಳ್ಳಿ ಇಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಕರುಣಾಕರ ರೈ ಮುಂಡೂರು ಧ್ವಜಾರೋಹಣ ನೆರವೇರಿಸಿದರು.
ನಂತರ ನಡೆದ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಶೆಟ್ಟಿ ನೆಲ್ಲಿಕಟ್ಟೆ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಗಂಗಾಧರ ಸಿ.ಎಚ್, ಶಾಲಾ ಹಿರಿಯ ಸಹಶಿಕ್ಷಕಿ ಪುಷ್ಪ, ಅಂಗನವಾಡಿ ಕಾರ್ಯಕರ್ತೆ ಜಯಂತಿ ಕಾನ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಹೇಮಾ. ಎನ್ ಸ್ವಾಗತಿಸಿ, ಅತಿಥಿ ಶಿಕ್ಷಕಿ ಸುಮ.ಡಿ ವಂದಿಸಿದರು. ಜ್ಞಾನ ದೀಪ ಶಿಕ್ಷಕಿ ಕುಸುಮ ಸಿ.ಎಚ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಂತದುರ್ಗಾ ಸ್ಪೋರ್ಟ್ಸ್ ಕ್ಲಬ್, ಜೈ ಯುವಶಕ್ತಿ ಯುವಕ ಮಂಡಲ ಕರ್ನಪ್ಪಾಡಿ, ನವದುರ್ಗಾ ಫ್ರೆಂಡ್ಸ್ ಕೊಪ್ಪಳ, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಶಾಲಾ ಪೋಷಕರು, ಹಳೆ ವಿದ್ಯಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡರು.ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

