ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ದಿನ ಆಚರಣೆ

0

ಈಶ್ವರಮಂಗಲ: ಶ್ರೀ ಗಜಾನನ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷರು ಮತ್ತು ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನದ ಅಧ್ಯಕ್ಷ ನನ್ಯ ಅಚ್ಚುತ ಮೂಡತ್ತಾಯರವರು ನೆರವೇರಿಸಿ, ಮಾತನಾಡಿ ಭಾರತ ಕಳೆದ 76 ವರ್ಷಗಳ ಅವಧಿಯಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಹೋರಾಟ ನಡೆಸಿ ತಮ್ಮ ಪ್ರಾಣವನ್ನು ಬಲಿದಾನ ನೀಡಿದ್ದಾರೆ. ಅಂತಹ ದೇಶಭಕ್ತರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿ ಗೌರವ ಸಮರ್ಪಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಹಾಗೂ ಮಕ್ಕಳಲ್ಲಿ ದೇಶಪ್ರೇಮವನ್ನು ಮೂಡಿಸುವುದು ಶಿಕ್ಷಕರ ಮತ್ತು ಹೆತ್ತವರ ಕರ್ತವ್ಯ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧ ಸುಬ್ಬಪ್ಪ ಪಟ್ಟೆ, ಸಂಸ್ಥೆಯ ಸಂಚಾಲಕರಾದ ಶಿವರಾಮ ಪಿ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ನಾಗಪ್ಪ ಗೌಡ ಬೊಮ್ಮೆಟ್ಟಿ, ನಿವೃತ್ತ ಮುಖ್ಯ ಗುರುಗಳಾದ ಶಿವರಾಮ ಶರ್ಮ, ನಿವೃತ್ತ ದೈಹಿಕ ಶಿಕ್ಷಕರಾದ ಆನಂದ ರೈ, ಶಾಲಾ ಪ್ರಾಂಶುಪಾಲರಾದ ಕೆ ಶಾಮಣ್ಣ, ಮುಖ್ಯ ಗುರುಗಳಾದ ಅಮರನಾಥ ಬಿ ಪಿ ಹಾಗೂ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಧ್ವಜಾರೋಹಣ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನನ್ಯ ಅಚ್ಚುತ ಮೂಡೆತ್ತಾಯ ವಹಿಸಿದರು. ನಿವೃತ್ತ ಯೋಧರಾದ ಸುಬ್ಬಪ್ಪ ಪಟ್ಟೆ ಇವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here