ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15ರಂದು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕ ಯು.ಜಿ ರಾಧಾ ಅವರು ಧ್ವಜಾರೋಹಣಗೈದು, ವಿದ್ಯಾರ್ಥಿಗಳು ವಿದೇಶ ವ್ಯಾಮೋಹವನ್ನು ತೊರೆದು ದೇಶ ಕಟ್ಟುವತ್ತ ಚಿಂತನೆ ನಡೆಸಬೇಕು ಎಂದರು.

10ನೇ ತರಗತಿಯ ಪ್ರಿಯಾ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನಗೈದ ರಾಷ್ಟ್ರಪ್ರೇಮಿಗಳನ್ನು ಸ್ಮರಿಸಿದರು. ಸಹ ಶಿಕ್ಷಕಿ ಶ್ರೀಮತಿ ಭವ್ಯ ವೈ. ಟಿ ಮಾತನಾಡಿ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯೋತ್ತರ ಭಾರತದ ಬಗ್ಗೆ ಬೆಳಕು ಚೆಲ್ಲುತ್ತಾ ಸ್ವಾತಂತ್ರ್ಯ ಹೋರಾಟಗಾರರ ಧ್ಯೆಯೋದ್ದೇಶಗಳನ್ನು ಇಂದಿನ ಯುವ ಪೀಳಿಗೆ ಅರಿತುಕೊಂಡು ರಾಷ್ಟ್ರಪ್ರೇಮಿಗಳಾಗಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ, ಆಡಳಿತ ಮಂಡಳಿಯ ಸದಸ್ಯರಾದ ಡಾ| ಸ್ವಾತಿ, ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ. ಪ್ರಕಾಶ್, ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ , ಉಪನ್ಯಾಸಕರ ವೃಂದ, ಪೋಷಕರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. 10ನೇ ತರಗತಿಯ ಕವಿತಾ ಕಾವರ್ ಸ್ವಾಗತಿ, ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here