





ಪುತ್ತೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಪುತ್ತೂರು ಕ್ಷೇತ್ರದ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಉಪ್ಪಿನಂಗಡಿಯಲ್ಲಿ ಆಚರಿಸಲಾಯಿತು.


ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆಯವರು ಧ್ವಜಾರೋಹಣ ನೆರವೇರಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪುತ್ತೂರು ನಗರಸಭಾ ಸದಸ್ಯೆ ಝೊಹರಾ ಬನ್ನೂರು ಹಾಗೂ ಉಪ್ಪಿನಂಗಡಿ ಗ್ರಾ.ಪಂ ಸದಸ್ಯೆ ನಫೀಸಾ ಉಪಸ್ಥಿತರಿದ್ದರು. ವಿಮ್ ಪುತ್ತೂರು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಝಾಹಿದಾ ಸಾಗರ್ ಸ್ವಾಗತಿಸಿದರು. ಉಪ್ಪಿನಂಗಡಿ ಗ್ರಾ.ಪಂ ಸದಸ್ಯೆ ಸೌದಾ ವಂದಿಸಿದರು.















