ರಾಮಕುಂಜ: ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಬಾಬು ಅಗರಿ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್‍ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಮದ್ರಸದ ಬದ್ರುದ್ದೀನ್ ಮುಸ್ಲಿಯಾರ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷರಾದ ಸಿದ್ದಿಕ್ ನೀರಾಜೆ, ಅಬ್ದುಲ್ ರಶೀದ್ ಹಾಜಿ ಬಡ್ಡಮೆ ಮಾತನಾಡಿದರು. ಉಪಾಧ್ಯಕ್ಷೆ ಸ್ವಪ್ನ, ಸದಸ್ಯರಾದ ಲಕ್ಷ್ಮಿ, ಪೆರ್ನು, ಅಬ್ದುಲ್ ರಜಾಕ್, ಸಲೀಂ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ. ಲತೀಫ್, ಗಣೇಶ್, ಎಸ್. ಅಬ್ದುಲ್ ರಹಿಮಾನ್ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಜನಾರ್ದನ ಗೌಡ ಕೆ. ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮ ವಂದಿಸಿದರು. ಚಿತ್ರಾವತಿ ಕಾರ್‍ಯಕ್ರಮ ನಿರೂಪಿಸಿದರು.