ಹೊಸಗದ್ದೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಹೊಸಗದ್ದೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಓಮಂದೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಪ್ರಭಾರ ಮುಖ್ಯಗುರು ವಿದ್ಯಾ ಕೆ.,ಅವರು ಸ್ವಾಗತಿಸಿ, ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಓಮಂದೂರು ಹಾಗೂ ನಿವೃತ್ತ ಮುಖ್ಯಶಿಕ್ಷಕಿ ಪೆಲ್ಸಿ ಡಯಾಸ್‌ರವರು ಸಂದರ್ಭೋಚಿತವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ನಡೆಯಿತು. ಸಹಶಿಕ್ಷಕಿ ಮಾಲತಿ ಕೆ., ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಪವಿತ್ರ ವಂದಿಸಿದರು. ಅತಿಥಿ ಶಿಕ್ಷಕಿ ಚಿತ್ರಾವತಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಪೋಷಕರು, ಊರ ವಿದ್ಯಾಭಿಮಾನಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here