ಹಿರೆಬಂಡಾಡಿ ಗ್ರಾ.ಪಂ-ಅಮೃತ ಸರೋವರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಹಿರೇಬಂಡಾಡಿ: ಅಡ್ಯಾಲ್‌ನಲ್ಲಿರುವ ಗ್ರಾ.ಪಂ.ನ ಅಮೃತ ಸರೋವರ ಮತ್ತು ಗ್ರಾ.ಪಂ.ನ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಅಮೃತ ಸರೋವರ ಬಳಿ ಮಾಜಿ ಶಾಸಕ ಸಂಜೀವ ಮಠಂದೂರುರವರು ಧ್ವಜಾರೋಹಣ ಮಾಡಿದರು. ಪಂಚಾಯತ್ ಕಚೇರಿಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿಯವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷರು, ಸದಸ್ಯರು, ಮಾಜಿ ಸದಸ್ಯರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here