ಪುತ್ತೂರು: ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 9.30ಕ್ಕೆ ಮಹಾವಿದ್ಯಾಲಯದ ಆವರಣದಲ್ಲಿ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ಕರ್ನಾಟಕ ಬ್ಯಾಂಕ್ ನ ಡೆಪ್ಯೂಟಿ ಮ್ಯಾನೇಜರ್ ಕೇಶವ ಕುಮಾರ್ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯದ ಜೊತೆಗೆ ನಮ್ಮ ಪೂರ್ವಜರು ಕೆಲವೊಂದು ಜವಾಬ್ದಾರಿಯನ್ನು ಸಹ ನೀಡಿದರು. ಕಾನೂನು ವಿದ್ಯಾರ್ಥಿಗಳಾದ ನಾವು ಸಿಕ್ಕಿದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಉತ್ತಮ ಕಾನೂನುಗಳ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಮಾಡಬೇಕು. ಆ ಜವಾಬ್ದಾರಿ ನಮಿಗಿದೆ ಎಂದರು. ಈ ವೇಳೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಸುರೇಂದ್ರ ಕಿಣಿ ಜಿ. ಉಪಸ್ಥಿತರಿದ್ದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಕೋಶಧಿಕಾರಿ ಯಶೋಧರ ಜೈನ್ ಬಹುಮಾನ ವಿತರಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕ ಅವರು, ಸ್ವಾತಂತ್ರ್ಯದ ಅರ್ಥವನ್ನು ವಿವರಿಸಿ, ವಿದ್ಯಾರ್ಥಿಗಳಿಗೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಂತೆ ಕರೆ ನೀಡಿದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಅಕ್ಷತಾ ಎ.ಪಿ. ಉಪಸ್ಥಿತರಿದ್ದರು.