ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಆ.15ರಂದು 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಗ್ರಾ.ಪಂ.ಸದಸ್ಯ ಆನಂದ ಪಿಲವೂರು ಧ್ವಜಾರೋಹಣ ನೆರವೇರಿಸಿ, ಶುಭನುಡಿಗಳನ್ನಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ಸುಬ್ರಾಯ ಪುಣಚ ಸ್ವಾತಂತ್ರ್ಯ ದಿನದ ಮಹತ್ವವನ್ನು ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಗುರು ಗಣೇಶ್ ವಾಗ್ಲೆ ಉಪಸ್ಥಿತರಿದ್ದರು. ಕುಮಾರಿ ಅನಿತಾ ಮಾತಾಜಿ ಧನ್ಯವಾದವಿತ್ತರು. ಅಶ್ವಿನಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here