ತೆಗ್ಗು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ 

0

ಪುತ್ತೂರು: ತೆಗ್ಗು ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಕೆಯ್ಯೂರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್ ಮೇರ್ಲ  ಧ್ವಜಾರೋಹಣವನ್ನು ನೆರವೇರಿಸಿದರು.ಗ್ರಾಮ ಪಂಚಾಯತ್ ಸದಸ್ಯರಾದ ಅಮಿತ ಹೆಚ್ ರೈ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಜಯಂತಿ ಕೆ ಹಾಗೂ ಸದಸ್ಯರು,ತೆಗ್ಗು ಶಾಲೆಯ ನಿವೃತ್ತ ಮುಖ್ಯಗುರು ಕಿರಣ್ ರಾಜ್ ಎಸ್,ತೆಗ್ಗು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಶುಭಪ್ರಕಾಶ್ ಗೌಡ,ಸ್ನೇಹ ಫ್ರೆಂಡ್ಸ್ ಕ್ಲಬ್ ತೆಗ್ಗು ಇದರ ಸದಸ್ಯರು, ಪೋಷಕರು, ಶಿಕ್ಷಕ ವೃಂದ ,ಅಡುಗೆ ಸಿಬ್ಬಂದಿಯವರು,ಹಳೆ ವಿದ್ಯಾರ್ಥಿಗಳು ಹಾಗೂ ಊರವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕೆಯ್ಯೂರು ಪಂಚಾಯತ್ ವತಿಯಿಂದ ಸಂಪಿಗೆ ಗಿಡವನ್ನು ಪಂಚಾಯತ್ ನ ಸದಸ್ಯರು ಶಾಲೆಗೆ ವಿತರಿಸಿದರು.ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಮುಖ್ಯ ಶಿಕ್ಷಕಿ ರಶ್ಮಿತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಅತಿಥಿ ಶಿಕ್ಷಕಿ  ನಳಿನಿ ಡಿ ವಂದಿಸಿದರು.

LEAVE A REPLY

Please enter your comment!
Please enter your name here