ಸವಣೂರು ಯುವಕ ಮಂಡಲದಲ್ಲಿ ಸ್ವಾತಂತ್ರ್ಯದಿನಾಚರಣೆ

0

ಸವಣೂರು : ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ಯುವಕ ಮಂಡಲದ ಆವರಣದಲ್ಲಿ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಯಿತು. ಧ್ವಜಾರೋಹಣವನ್ನು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ. ನೆರವೇರಿಸಿದರು.

ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್‌ ರೈ ಕೆಡೆಂಜಿ,ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್‌ ರೈ ಸೂಡಿಮುಳ್ಳು,ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ ಸೇರಿದಂತೆ ಯುವಕ ಮಂಡಲದ ಮಾಜಿ ಅಧ್ಯಕ್ಷರು,ಮಾಜಿ ಕಾರ್ಯದರ್ಶಿಗಳು,ಸದಸ್ಯರು,ಪ್ರಮುಖರು ಉಪಸ್ಥಿತರಿದ್ದರು.

ಯುವಕ ಮಂಡಲದ ಕಾರ್ಯದರ್ಶಿ ಕೀರ್ತನ್‌ ಕೋಡಿಬೈಲು ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here