ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷ ಬಾಬುಶೆಟ್ಟಿ ವೀರಮಂಗಲರವರು ಧ್ವಜಾರೋಹಣ ನೆರವೇರಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಸ್ವಾತಂತ್ರ್ಯ ದೊರೆತು 76 ವರ್ಷಗಳು ಕಳೆದಿದೆ. ನಮ್ಮ ಹಿರಿಯರು ಕಷ್ಟಪಟ್ಟು ದೊರಕಿಸಿ ಕೊಟ್ಟ ಸ್ವಾತಂತ್ರ್ಯದ ಮಹತ್ವವನ್ನು ಅರಿತು ಬಾಳುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಜಿಲ್ಲೆ ಸಂಪದ್ಭರಿತ ಜಿಲ್ಲೆಯಾಗಿದ್ದು ಇಲ್ಲಿನ ಶ್ರಮಿಕ ಹಾಗೂ ಕೃಷಿಕ ವರ್ಗ ಅತ್ಯಂತ ಯಶಸ್ವಿ ಜೀವನ ನಡೆಸುವಂತಹ ಅವಕಾಶಗಳು ಹೇರಳವಾಗಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಲ್ಲಿ ಪ್ರಯತ್ನ ಪಡಬೇಕು ಎಂದು ಕರೆ ನೀಡಿದರು. ಸತತ ಹದಿನೈದು ವರ್ಷಗಳಿಂದ ಅಧ್ಯಕ್ಷ ಸ್ಥಾನದಲ್ಲಿ ನಿಂತು ಧ್ವಜಾರೋಹಣ ಮಾಡಲು ಅವಕಾಶ ಮಾಡಿಕೊಟ್ಟಿರುವ ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನಿರ್ದೇಶಕರಾದ ಹೊನ್ನಪ್ಪ ಪೂಜಾರಿ ಕೈಂದಾಡಿ, ಪರಮೇಶ್ವರ ಭಂಡಾರಿ, ಕುಶಾಲಪ್ಪ ಗೌಡ, ವಿಜೇಶ್, ನಾರಾಯಣ ಪೂಜಾರಿ, ಶಿವರಾಮ, ನಾಗಮ್ಮ ಟಿ, ಯಮುನಾ ಹಾಗೂ ಸಂಘದ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಹೆಚ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here